ಬಿಜೆಪಿ, ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ
ಮಣಿಪುರ: ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಮಣಿಪುರದಲ್ಲಿ ಬಹುಮತಕ್ಕಾಗಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇತ್ತೀಚಿನ ವರದಿಯ ಪ್ರಕಾರ ಒಟ್ಟು 60 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಎಡಪಕ್ಷಗಳು 2 ಪಕ್ಷೇತರ ಅಭ್ಯರ್ಥಿಗಳು ಹಾಗೂ ಇತರರು 05 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಪ್ರಾರಂಭದಲ್ಲಿ ಮಣಿಪುರ ಮುಖ್ಯಮಂತ್ರಿ ಒ. ಇಬೋಬಿ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಇರೋಮ್ ಶರ್ಮಿಳಾ ಹಿನ್ನಡೆ ಎದುರಿಸಿದ್ದರಾದರೂ ಇತ್ತೀಚಿನ ವರದಿಗಳ ಪ್ರಕಾರ ಇರೋಮ್ ಶರ್ಮಿಳಾ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರೆ, ಪಂಜಾಬ್ ಹಾಗೂ ಗೋವಾ ರಾಜ್ಯಗಳಲ್ಲಿ ಹಿನ್ನಡೆ ಎದುರಿಸಿದೆ.