ಬಿಎಸ್ ಯಡ್ಯೂರಪ್ಪ 
ದೇಶ

ಪಂಚ ರಾಜ್ಯ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ, ಚುನಾವಣೆಗೆ ದಿಕ್ಸೂಚಿ: ಯಡ್ಯೂರಪ್ಪ

ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದಿಂದ ಈ ಫಲಿತಾಂಶ ದೊರೆತಿದ್ದು, ಉತ್ತರ ಪ್ರದೇಶ ಮಾದರಿಯ ಫಲಿತಾಂಶವೂ ರಾಜ್ಯದಲ್ಲಿ ಬರಲಿದ್ದು, ದೇಶಾದ್ಯಂತ ಬಿಜೆಪಿ, ಮೋದಿ ಪರ ಅಲೆ ಎದ್ದಿದೆ ಎಂದು ಯಡ್ಯೂರಪ್ಪ ಹೇಳಿದ್ದಾರೆ. ಹಗುರವಾಗಿ ಮಾತನಾಡುತ್ತಿದ್ದವರಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ಕೀರ್ತಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು, ಚುನಾವಣೆಯ ಫಲಿತಾಂಶ ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯ ಮೇಲೂ ಪರಿಣಾಮ ಬೀರಲಿದ್ದು, ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT