ಸಂಗ್ರಹ ಚಿತ್ರ 
ದೇಶ

ಗೋವಾದಲ್ಲಿ ಸಿಎಂ ಪರ್ಸೇಕರ್ ಗೆ ಮುಖಭಂಗ, ಮ್ಯಾಂಡ್ರೆಮ್ ಕ್ಷೇತ್ರದಲ್ಲಿ ಸೋಲು!

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾ ರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ.

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾ ರೂಢ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲು  ಕಂಡಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಗೋವಾದ ಒಟ್ಟು 40 ಕ್ಷೇತ್ರಗಳ ಪೈಕಿ ಬಿಜೆಪಿ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ 11 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೋವಾದಲ್ಲಿ  ಅಧಿಕಾರದ ಚುಕ್ಕಾಣಿ ಹಿಡಿಯಲು 21 ಕ್ಷೇತ್ರಗಳ ಅವಶ್ಯಕತೆ ಇದೆ.

ಪರ್ಸೇಕರ್ ಗೆ ಮುಖಭಂಗ, ಮ್ಯಾಂಡ್ರೆಮ್ ಕ್ಷೇತ್ರದಲ್ಲಿ ಸೋಲು!
ಇನ್ನು ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸ್ವಕ್ಷೇತ್ರ ಕಳೆದುಕೊಂಡಿದ್ದು, ಮ್ಯಾಂಡ್ರೆಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದಾರೆ. ಪರ್ಸೇಕರ್ ಅವರು ಕಾಂಗ್ರೆಸ್ ನ ದಯಾನಂದ ಸೋಪ್ಪೆ ವಿರುದ್ಧ  ಸೋಲು ಕಂಡಿದ್ದಾರೆ. ಇನ್ನು ಎನ್ ಸಿಪಿ ಮುಖಂಡ ಚರ್ಚಿಲ್ ಅಲೆಮೋವ ಅವರು ಬೆನಾಲಿಮ್ ಕ್ಷೇತ್ರದಲ್ಲಿ ಜಯ ಸಾಧಿಸಿದ್ದು, ಸ್ವತಂತ್ರ ಅಭ್ಯರ್ಥಿ ಸೀಟಾನೋ ಸಿಲ್ವಾ ಅವರ ವಿರುದ್ಧ ಜಯಗಳಿಸಿದ್ದಾರೆ. ಗೋವಾ ಚುನಾವಣಾಯಲ್ಲಿ  ಇದು ಎನ್ ಸಿಪಿ ಪಕ್ಷದ ಮೊದಲ ಗೆಲುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel