ಛತ್ತೀಸ್‌ಘಡ್: ಛತ್ತೀಸ್‌ಘಡ್ ದ ಸುಕ್ಮಾದ ಬೇಜಾ ಬಳಿ ಸಿಆರ್ಪಿಎಫ್ ಯೋಧರ ಮೇಲೆ ನಕ್ಸಲ್ ರು ಗುಂಡಿನ ದಾಳಿ ನಡೆಸಿದ್ದು ಪರಿಣಾಮ 11 ಸಿಆರ್ಪಿಎಫ್ ಯೋಧರು ಮೃತಪಟ್ಟಿದ್ದು ಇಬ್ಬರು ಮಂದಿ ಗಾಯಗೊಂಡಿದ್ದಾರೆ.
ಏಕಾಏಕಿ ನಕ್ಸಲರು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಹಲವು ಸಿಆರ್ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಐಜಿ ಸುಂದರ್ ರಾಜ್ ಹೇಳಿದ್ದಾರೆ.
ಮಾರ್ಚ್ 10ರಂದು ಪೊಲೀಸರಿಗೆ ಮಾಹಿತಿ ನೀಡುತ್ತಿರುವ ಶಂಕೆ ಮೇಲೆ ಸುಕ್ಮಾ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ರನ್ನು ನಕ್ಸಲರು ಹತ್ಯೆ ಮಾಡಿದ್ದರು.