ದೇಶ

ಪಂಚರಾಜ್ಯ ಚುನಾವಣಾ ಫಲಿತಾಂಶ: ರಾಹುಲ್ ಅಭಿನಂದನೆಗೆ ಹೀಗಿತ್ತು ಪ್ರಧಾನಿ ಮೋದಿ ಪ್ರತಿಕ್ರಿಯೆ

Shilpa D

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅಭಿನಂದಿಸಿದ್ದಾರೆ.

ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್‌ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ  ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ  ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ "Thank you. Long live democracy!"  ಎಂದು ರಿಟ್ವೀಟ್‌ ಮಾಡಿದ್ದಾರೆ.

ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ಪರಸ್ಪರ ಟೀಕೆಗಳ ಸುರಿಮಳೆ ಸುರಿಸುತ್ತಿದ್ದ ಇಬ್ಬರು ನಾಯಕರು ಫಲಿತಾಂಶದ ನಂತರ ಪರಸ್ಪರ ಶುಭಾಶಯ ಹೇಳಿಕೊಂಡಿದ್ದಾರೆ.

SCROLL FOR NEXT