ಲಕ್ಷ್ಮಿಕಾಂತ್ ಪರ್ಸೆಕರ್-ಇರೋಮ್ ಶರ್ಮಿಳಾ-ಹರೀಶ್ ರಾವತ್
ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಘಟಾನುಗಟಿಗಳು ಸೋಲು ಕಂಡಿದ್ದಾರೆ.
ಉತ್ತರಪ್ರದೇಶ, ಉತ್ತರಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದು, ಉತ್ತರಪ್ರದೇಶ ಮತ್ತು ಉತ್ತರಖಂಡ್ ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಇನ್ನು ಪಂಜಾಬ್ ಮತ್ತು ಮಣಿಪುರ ಗೋವಾದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಉತ್ತರಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಹರಿದ್ವಾರ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದು ಬಿಜೆಪಿ ಅಭ್ಯರ್ಥಿ ಯತಿಶ್ವರಾನಂದ್ ವಿರುದ್ಧ ಸೋಲು ಕಂಡಿದ್ದಾರೆ.
ಬಿಜೆಪಿ ಹಿರಿಯ ಮುಖಂಡ ಗೋವಾದ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 3500 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಮಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪರ್ಸೆಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ದಯಾನಂದ್ ರಘುನಾಥ್ ವಿರುದ್ಧ ಸೋಲು ಕಂಡಿದ್ದಾರೆ. ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರನ್ನು ಕೇಂದ್ರ ರಕ್ಷಣಾ ಸಚಿವರನ್ನಾಗಿ ನೇಮಕ ಮಾಡಿದ ನಂತರ 2014ರ ನವೆಂಬರ್ 8ರಂದ ಲಕ್ಷ್ಮಿಕಾಂತ್ ಪರ್ಸೆಕರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಮಣಿಪುರದ ತೌಬಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಾಮಾಜಿಕ ಕಾರ್ಯಕರ್ತೆ ಇರೋಮ್ ಶರ್ಮಿಳಾ ವಿರುದ್ಧ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ಗೆದ್ದಿದ್ದಾರೆ. ಶರ್ಮಿಳಾ 100 ಕ್ಕೂ ಕಡಿಮೆ ಮತಗಳನ್ನು ಗಳಿಸಿದ್ದಾರೆ. 15 ಸಾವಿರ ಕ್ಕೂ ಹೆಚ್ಚು ಅಂತರದಿಂದ ಪ್ರಜಾ ಪಕ್ಷದ ಶರ್ಮಿಳಾ ಅವರ ವಿರುದ್ಧ ಮೂರು ಅವಧಿಯ ಮುಖ್ಯಮಂತ್ರಿ ಓಕ್ರಾಮ್ ಸುಲಭವಾಗಿ ಗೆದ್ದಿದ್ದಾರೆ. ಬಿಜೆಪಿ ಪಕ್ಷದ ಲೇಯ್ತಂಥೆಮ್ ಬಸಂತ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos