ಸಾಂದರ್ಭಿಕ ಚಿತ್ರ 
ದೇಶ

ಗುದದ್ವಾರದಲ್ಲಿ 35 ಲಕ್ಷ ರು. ಮೌಲ್ಯದ ಚಿನ್ನದ ಗಟ್ಟಿಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

: ಗುದದ್ವಾರದಲ್ಲಿ ಹಾಗೂ ದೇಹದ ಇತರ ಭಾಗಗಳಲ್ಲಿ ಮುಚ್ಚಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೊಯಂಬತ್ತೂರಿನಲ್ಲಿ ಡಿಐರ್ ಐ ಅ ಅಧಿಕಾರಿಗಳು ...

ಕೊಯಂಬತ್ತೂರು: ಗುದದ್ವಾರದಲ್ಲಿ ಹಾಗೂ ದೇಹದ ಇತರ ಭಾಗಗಳಲ್ಲಿ ಮುಚ್ಚಿಟ್ಟುಕೊಂಡು ಚಿನ್ನದ ಗಟ್ಟಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೊಯಂಬತ್ತೂರಿನಲ್ಲಿ ಡಿಐರ್ ಐ ಅ ಅಧಿಕಾರಿಗಳು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಶಾರ್ಜಾದಿಂದ ಆಗಮಿಸಿದ್ದ  ಕೇರಳ ಮೂಲದ ಮಲ್ಲಾಪ್ಪುರಾಂ ನ ಕೋಲಮುಕಾತ್ ಕರೀಮ್ ಸಾಜಿದ್(36) ಎಂಬಾತನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಏರ್ ಅರೇಬಿಯಾ ವಿಮಾನದಲ್ಲಿ ಆಗಮಿಸಿದ್ದ ಕೋಲಮುಕಾಥ್ ನ ಸಂಶಯಾಸ್ಪದ ಚಲನವಲನಗಳನ್ನು ಗಮನಿಸಿದ ಅಧಿಕಾರಿಗಳು ಆತನನ್ನು ಪರೀಕ್ಷಿಸಿದ್ದಾರೆ. ಆ ವೇಳೆ ಆತ ತನ್ನ ಗುದದ್ವಾರ ಹಾಗೂ ದೇಹದ ಇತರೆ ಭಾಗಗಳಲ್ಲಿ  ಮುಚ್ಚಿಟ್ಟು ಸುಮಾರು 35 ಲಕ್ಷ ರು. ಮೌಲ್ಯದ 1.16 ಕೆಜಿ ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದುದ್ದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಚಿನ್ನವನ್ನು ಜಪ್ತಿ ಮಾಡಿರುವ ಅಧಿಕಾರಿಗಳು ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!