ಸುಕ್ಮಾ ದಾಳಿ: ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಸುಕ್ಮಾದಲ್ಲಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಸಂತಾಪ ಸೂಚಿಸಿದ್ದಾರೆ...
ನವದೆಹಲಿ: ಸುಕ್ಮಾದಲ್ಲಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಸಂತಾಪ ಸೂಚಿಸಿದ್ದಾರೆ.
ಛತ್ತೀಸ್ಗಡದ ಸುಕ್ಮಾದ ಬೇಜಾ ಬಳಿ ಸಿಆರ್'ಪಿಎಫ್ ಯೋಧರ ಮೇಲೆ ನಕ್ಸಲರು ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 11 ಮಂದಿ ಸಿಆರ್'ಪಿಎಫ್ ಯೋಧರು ಹುತಾತ್ಮರಾಗಿದ್ದರು.
ನಕ್ಸಲರ ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ತೀವ್ರ ನೋವಾಯಿದು. ಹುತಾತ್ಮ ಯೋಧರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಈ ಮೂಲಕ ಸಂತಾಪವನ್ನು ಸೂಚಿಸುತ್ತಿದ್ದಾರೆ. ಗಾಯಗೊಂಡ ಯೋಧರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಸುಕ್ಮಾ ದಾಳಿ ಕುರಿತಂತೆ ಈಗಾಗಲೇ ಗೃಹ ಸಚಿವ ರಾಜನಾಥ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ರಾಜನಾಥ್ ಸಿಂಗ್ ಅವರು ಸುಕ್ಮಾಗೆ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆಂದು ತಿಳಿಸಿದ್ದಾರೆ.