ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತೀಯ ಜನತಾ ಪಾರ್ಟಿ 125 ಕೋಟಿ ಭಾರತೀಯ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದೆ. ನಮ್ಮ ಪ್ರತಿಯೊಂದು ಕ್ಷಣವನ್ನು ಭಾರತೀಯರ ಕಲ್ಯಾಣಕ್ಕಾಗಿ ಉಪಯೋಗಿಸುತ್ತೇವೆ ಎಂದು ಟ್ಟೀಟ್ ಮಾಡಿದ್ದಾರೆ.
ಹಗಲು ರಾತ್ರಿಯೆನ್ನದೆ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿರುವ ಪ್ರಧಾನಿ ಮೋದಿ, ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಯುವಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದೇ ವೇಳೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಅಮಿತ್ ಶಾ ಕಾರ್ಯತಂತ್ರ ನಿಜಕ್ಕೂ ಮೆಚ್ಚುವಂತಹದ್ದು ಹೊಗಳಿದ್ದಾರೆ.
ಉತ್ತರಾಖಂಡ್‌ನಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಿರುವುದು ನಿಜಕ್ಕೂ ಹೆಮ್ಮೆ ಇದೆ ಎಂದಿರುವ ಮೋದಿ, ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
2012ರ ಚುನಾವಣೆಯಲ್ಲಿ ಬಿಜೆಪಿ 47 ಸೀಟುಗಳನ್ನು ಪಡೆದುಕೊಂಡಿತ್ತು, ಈಗ 323 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಸಿದೆ. ಮಾಯಾವತಿ ನಾವು ಕೇವಲ 18 ಸೀಟುಗಳನ್ನು ಮಾತ್ರ ಜಯ ಗಳಿಸುತ್ತೇವೆ ಎಂದು ಹೇಳಿದ್ದರು. ಕಾಂಗ್ರೆಸ್- ಎಸ್ ಪಿ ಮೈತ್ರಿಯ ನಂತರ ಬಿಜೆಪಿ ಕೇವಲ 58 ಅಭ್ಯರ್ಥಿಗಳು ಮಾತ್ರ ಗೆಲ್ಲಲು ಶಕ್ತವಾಗಿದೆ ಎಂದು ಹೇಳಿದ್ದರು ಎಂದು ಅವರು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.