ಗೆಲುವಿನ ನಂತರ ಅಮರಿಂದರ್ ಸಿಂಗ್ 
ದೇಶ

ಮಾ.16ಕ್ಕೆ ಪಂಜಾಬ್ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಪ್ರಮಾಣ

ಇತ್ತೀಚಿಗೆ ನಡೆದ ಪಂಜಾಬ್ ವಿಧಾಸಭೆ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ....

ನವದೆಹಲಿ: ಇತ್ತೀಚಿಗೆ ನಡೆದ ಪಂಜಾಬ್ ವಿಧಾಸಭೆ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಾರ್ಚ್ 16ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಭರ್ಜರಿ ಗೆಲುವು ಸಾಧಿಸಿದ ನಂತರ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್ ಅವರು, ಪಂಜಾಬ್ ನಲ್ಲಿ ಡ್ರಗ್ ಮಾಫಿಯಾ ತಡೆಯಲು ವಿಶೇಷ ಟಾಸ್ಕ್ ಫೋರ್ಸ್ ರಚಿಸುವುದಾಗಿ ಹಾಗೂ ರಾಜ್ಯವನ್ನು ಹೂಡಿಕೆ ಸ್ನೇಹಿ ರಾಜ್ಯವಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮರಿಂದರ್ ಸಿಂಗ್ ಅವರು ತಿಳಿಸಿದ್ದಾರೆ.
117 ಸದಸ್ಯ ಬಲ ಹೊಂದಿರುವ ಪಂಜಾಬ್ ವಿಧಾನಸಭೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ