ಇಂಫಾಲ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶಗಳ ಪ್ರಕಟವಾಗಿದ್ದು ಮಣಿಪುರ, ಗೋವಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಎರಡೂ ರಾಜ್ಯಗಳಲ್ಲಿ ಸರ್ಕಾರ ರಚಿಸುವುದಾಗಿ ಬಿಜೆಪಿ ಹೇಳುತ್ತಿದೆ. ಮಣಿಪುರದಲ್ಲಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ರಚಿಸುವುದಕ್ಕೆ ಅಗತ್ಯವಿರುವ ಸಂಖ್ಯಾಬಲವನ್ನು ಬಿಜೆಪಿ ಗಳಿಸಲಿದೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಜನತೆ ಕಾಂಗ್ರೆಸ್ ನ್ನು ತಿರಸ್ಕರಿಸುವುದು ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರ ರಚಿಸಲು ಇತರ ಪಕ್ಷಗಳು ಹಾಗೂ ಪಕ್ಷೇತರರು ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ. 60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಪಡೆದಿದೆ.