ಪಣಜಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಪೈಕಿ ಗೋವಾ ವಿಧಾನಸಭೆ ಅತಂತ್ರವಾಗಿದ್ದು, ಬಿಜೆಪಿ ಸರ್ಕಾರ ರಚಿಸುವುದಾಗಿ ಹೇಳಿದೆ.
40 ವಿಧಾನಸಭಾ ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳನ್ನು ಗೆದ್ದಿರುವ ಕಾಂಗ್ರೆಸ್ ಗೋವಾದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಬಿಜೆಪಿ ಸರ್ಕಾರ ರಚಿಸಲು ತಯಾರಿ ನಡೆಸಿದೆ. "ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ದಿಂದ ನಮಗೆ ಪತ್ರ ಬಂದಿದ್ದು, ಇಬ್ಬರು ಪಕ್ಷೇತರರೂ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಗೋವಾದಲ್ಲಿ ಬಿಜೆಪಿ 13 ಸ್ಥಾನಗಳನ್ನು ಗೆದ್ದಿದ್ದು ಸರ್ಕಾರ ರಚಿಸಲು 21 ಶಾಸಕರ ಬೆಂಬಲ ಅಗತ್ಯವಿದೆ. 3 ಶಾಸಕರನ್ನು ಹೊಂದಿರುವ ಗೋವಾ ಫಾರ್ವರ್ಡ್ ಪಕ್ಷದೊಂದಿಗೂ ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದು, ಸರ್ಕಾರ ರಚನೆಗೆ ಬೆಂಬಲ ಪಡೆಯಲು ಯತ್ನಿಸುತ್ತಿದ್ದಾರೆ.