ಹರಿದ್ವಾರ: ಹರಿದ್ವಾರದಿಂದ ದೆಹಲಿಗೆ ತೆರಳುತ್ತಿದ್ದ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಹೆಲಿಕಾಫ್ಟರ್ ಹಾತುವಾಗ ತಲೆಗೆ ಪೆಟ್ಟು ಬಿದ್ದಿದೆ.
ಹೆಲಿಕಾಫ್ಟರ್ ಹತ್ತಬೇಕಾದರೆ ಕಾಲು ಜಾರಿದ ಪರಿಣಾಮ ತಲೆಗೆ ಪೆಟ್ಟು ಬಿದ್ದಿದೆ. ಸಣ್ಣ ಪೆಟ್ಟು ಬಿದ್ದಿದೆ ಎಂದು ಪತಂಜಲಿ ವಕ್ತಾರ ಎಸ್ ಕೆ ತಿಜಾರ್ವಾಲಾ ಹೇಳಿದ್ದಾರೆ.
ಹರಿದ್ವಾರದಲ್ಲಿರುವ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಯೋಗಪೀಠಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.