ದೇಶ

ಹೈದರಾಬಾದ್: ನಿರ್ಮಾಣ ಹಂತದ ಕಟ್ಟಡ ಕುಸಿತ, ಇಬ್ಬರು ಸಾವು

Manjula VN
ಹೈದರಾಬಾದ್: ಹೈದರಾಬಾದ್ ನ ಮಧಪುರ್'ನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಪರಿಣಾಮ ಕಟ್ಟಡದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 
ಮಧಪುರ್'ನ ಇನ್ಫಾರ್ಮೇಷನ್ ಟೆಕ್ನಾಲಜಿ ಹಬ್ ಬಳಿ ಘಟನೆ ನಡೆದಿದ್ದು, ಕಟ್ಟಡ ನಿರ್ಮಾಣ ಮಾಡುತ್ತಿರುವ ವೇಳೆ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಈ ವೇಳೆ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಅವಶೇಷಗಳಡಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ನಾಲ್ವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. 
SCROLL FOR NEXT