ಒ.ಪನ್ನೀರ್ ಸೆಲ್ವಂ 
ದೇಶ

ಪನ್ನೀರ್ ಸೆಲ್ವಂ ಬಣ ಸೇರಿದ ಎಐಎಡಿಎಂಕೆ ಶಾಸಕ ಅರುಣ್ ಕುಮಾರ್

ಶಶಿಕಲಾ ವಿರುದ್ಧ ಬಂಡಾಯವೆದ್ದಿದ್ದ ಒ.ಪನ್ನೀರ್ ಸೆಲ್ವಂ ಅವರ ಬಣಕ್ಕೆ ಎಐಎಡಿಎಂಕೆ ಪಕ್ಷದ ಶಾಸಕ ಅರುಣ್ ಕುಮಾರ್ ಅವರು ಭಾನುವಾರ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪನ್ನೀರ್ ಸೆಲ್ವಂ ಅವರ ಬೆಂಬಲಿಗರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ...

ಚೆನ್ನೈ; ಶಶಿಕಲಾ ವಿರುದ್ಧ ಬಂಡಾಯವೆದ್ದಿದ್ದ ಒ.ಪನ್ನೀರ್ ಸೆಲ್ವಂ ಅವರ ಬಣಕ್ಕೆ ಎಐಎಡಿಎಂಕೆ ಪಕ್ಷದ ಶಾಸಕ ಅರುಣ್ ಕುಮಾರ್ ಅವರು ಭಾನುವಾರ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪನ್ನೀರ್ ಸೆಲ್ವಂ ಅವರ ಬೆಂಬಲಿಗರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 
ಕೊಯಿಮತ್ತೂರು ಉತ್ತರದ ಎಐಎಡಿಎಂಕೆ ಶಾಸಕ ಪಿಆರ್'ಜಿ ಅರುಕುಮಾರ್ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಕೂವತೂರಿನ ರೆಸಾರ್ಟ್ ನಿಂದ ಏನನ್ನೂ ಮಾತನಾಡದೆ ಹೊರ ಬಂದಿದ್ದರು. ಫೆ.18ರಂದು ನಡೆದ ವಿಶ್ವಾಸ ಮತಯಾಚನೆಗೆಯಲ್ಲಿ ಅರುಣ್ ಅವರು ಪಾಲ್ಗೊಂಡಿರಲಿಲ್ಲ. ಇದೀಗ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ತಮ್ಮ ನಿವಾಸದಿಂದಲೇ ನಿನ್ನೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. 
ಎಐಎಡಿಎಂಕೆ ಪಕ್ಷದ ಕುಟುಂಬ ಒಡೆಯುತ್ತಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. 
ಅರುಣ್ ಕುಮಾರ್ ಅವರ ಈ ನಡೆಗೆ ಪ್ರತಿಕ್ರಿಯೆ ನೀಡಿರುವ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು, ಅರುಣ್ ಕುಮಾರ್ ಅವರು ತಮ್ಮ ನಿರ್ಧಾರವನ್ನು ಹಿಂಪಡೆದುಕೊಂಡು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT