ಸಂಗ್ರಹ ಚಿತ್ರ 
ದೇಶ

ಅಂಡಮಾನ್​ ದ್ವೀಪದಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.9ರಷ್ಟು ತೀವ್ರತೆಯ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಮಂಗಳವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ.

ಪೋರ್ಟ್​ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಮಂಗಳವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ.

ನಿಕೋಬಾರ್ ದ್ವೀಪ ಸಮೂಹ ಭೂಗರ್ಭದ ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಮಂಗಳವಾರ ಬೆಳಗ್ಗೆ 8.21ರ ಸುಮಾರಿಗೆ ಭೂಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಪ್ರಸ್ತುತ ಸಂಭವಿಸಿರುವ ಕಂಪನ ಪ್ರಬಲವೇ ಆಗಿದ್ದರೂ ಸುನಾಮಿ ಅಲೆಗಳನ್ನು ಸೃಷ್ಟಿಸುವಷ್ಟು ಪ್ರಬಲವಲ್ಲ. ಹೀಗಾಗಿ ಸುನಾಮಿ ಏಳುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಭೂಕಂಪನದಿಂದಾಗಿ ಜೀವಹಾನಿ ಮತ್ತು ಆಸ್ತಿಗಳಿಗೆ ಹಾನಿಯಾಗಿರುವ ಕುರಿತು ಈವರೆಗೂ ಯಾವುದೇ ರೀತಿಯ ಮಾಹಿತಿಗಳು ದೊರೆತಿಲ್ಲ. ಅಧಿಕಾರಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟವರೊಂದಿಗೆ ನಿರಂತರ  ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ ಮಂಗಳವಾರ ಬೆಳಗ್ಗೆ 5.48 ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲೂ ಲಘು ಪ್ರಮಾಣದ ಅಂದರೆ 3.6 ತೀವ್ರತೆಯ ಭೂಕಂಪನ ಸಂಭವಿಸಿತ್ತು.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ