ಸಂಗ್ರಹ ಚಿತ್ರ 
ದೇಶ

ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ; ಬಿಕೆ ಹರಿಪ್ರಸಾದ್ ರಾಜಿನಾಮೆ

ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಒಡಿಶಾ ರಾಜ್ಯದ ಉಸ್ತುವಾರಿ ನಾಯಕ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಕೆ ಹರಿ ಪ್ರಸಾದ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಒಡಿಶಾ ರಾಜ್ಯದ ಉಸ್ತುವಾರಿ ನಾಯಕ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಕೆ ಹರಿ ಪ್ರಸಾದ್ ಅವರು ತಮ್ಮ ಸ್ಥಾನಕ್ಕೆ  ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಒಡಿಶಾ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಬಿಕೆ ಹರಿ ಪ್ರಸಾದ್ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿಲ್ಲ. ಇದೇ ಕಾರಣಕ್ಕೆ ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಯಿತು ಎಂದು ಒಡಿಶಾದ ಹಲವು ಶಾಸಕರು  ದೂರಿದ್ದರು. ಅಂತೆಯೇ ಹರಿಪ್ರಸಾದ್ ಅವರನ್ನು ಬದಲಿಸಿ ರಾಜ್ಯದ ಉಸ್ತುವಾರಿಯನ್ನು ಸಮರ್ಥನಾಯಕರಿಗೆ ನೀಡಬೇಕು ಎಂದು ಒಡಿಶಾ ಕಾಂಗ್ರೆಸ್ ನ ಯುವ ಘಟಕ ಆಗ್ರಹಿಸಿತ್ತು. ಈ ಹಿಂದೆ ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್  ಹರಿಚರಣ್ ರೊಂದಿಗೆ ಖಾಸಗಿ ಹೊಟೆಲ್ ನಲ್ಲಿ ಸಮಾಲೋಚನೆ ನಡೆಸುತ್ತಿದ್ದಾಗ ಹೊಟೆಲ್ ಗೇ ನುಗ್ಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಬಿಕೆ ಹರಿಪ್ರಸಾದ್ ಅವರ ವಿರುದ್ಧ ಘೋಷಣೆ ಕೂಗಿದ್ದರು.

ಈ ಎಲ್ಲ ಬೆಳವಣಿಗೆಗಳು ಬಿಕೆ ಹರಿ ಪ್ರಸಾದ್ ಅವರ ರಾಜಿನಾಮೆ ಕಾರಣ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್