ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ 
ದೇಶ

ಮಣಿಪುರ, ಗೋವಾದಲ್ಲಿ ಬಿಜೆಪಿ ಸರ್ಕಾರ ರಚನೆ ವಿರೋಧಿಸಿ ಸಂಸತ್ ನಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಮಂಡನೆ?

ಗೋವಾ ಹಾಗೂ ಮಣಿಪುರದಲ್ಲಿ ಎರಡನೇ ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಿದೆ.

ನವದೆಹಲಿ: ಗೋವಾ ಹಾಗೂ ಮಣಿಪುರದಲ್ಲಿ ಎರಡನೇ ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಕ್ರಮವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಿದೆ. 
ಕಾಂಗ್ರೆಸ್ ನ ಆಂತರಿಕ ಮೂಲಗಳ ಪ್ರಕಾರ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಸಂಸದರು ನಿಲುವಳಿ ಸೂಚನೆ ಮಂಡಿಸಲಿದ್ದಾರೆ. ನಂತರ ಗೋವಾ, ಮಣಿಪುರಗಳಲ್ಲಿ ಅತಿ ದೊಡ್ಡ ಪಕ್ಷವನ್ನು ಕಡೆಗಣಿಸಿ ಎರಡನೇ ಸ್ಥಾನದಲ್ಲಿರುವ ಪಕ್ಷಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡಿರುವ ಬಗ್ಗೆ ಚರ್ಚೆಗೆ ಆಗ್ರಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಗೋವಾ ಮಣಿಪುರದಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಎರಡೂ ರಾಜ್ಯಗಳಲ್ಲಿ ಪಕ್ಷೇತರರು ಹಾಗೂ ಇತರ ಪಕ್ಷಗಳ ಬೆಂಬಲದಿಂದ ಬಿಜೆಪಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಬಿಜೆಪಿಯ ನಡೆಯನ್ನು ಕಾಂಗ್ರೆಸ್ ವಿರೋಧಿಸಿದ್ದು, ಗೋವಾದಲ್ಲಿ ತನಗೇ ರಚನೆಗೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!