ಅರುಣ್ ಜೇಟ್ಲಿ 
ದೇಶ

ಹೆಚ್ಚುವರಿಯಾಗಿ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅರುಣ್ ಜೇಟ್ಲಿ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೆಚ್ಚುವರಿಯಾಗಿ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೆಚ್ಚುವರಿಯಾಗಿ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಕ್ಷಣಾ ಸಚಿವ ಸ್ಥಾನಕ್ಕೆ ಮನೋಹರ್ ಪರಿಕ್ಕರ್ ನೀಡಿದ್ದ ರಾಜಿನಾಮೆಯನ್ನು ಅಂಗೀಕರಿಸಿದ್ದರು. ಇಂದು ಪ್ರಧಾನಿ ಸಲಹೆಯಂತೆ ರಕ್ಷಣಾ ಖಾತೆಯ ಹೊಣೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ನೀಡಿದ್ದಾರೆ.
ಮನೋಹರ್ ಪರಿಕ್ಕರ್ ಅವರು ಇಂದು ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ರಕ್ಷಣಾ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್