ಇಂಫಾಲ್: ಇಂಪಾಲ: ಮಣಿಪುರದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ನೊಂಗ್ದೊಮ್‌ಬಾಮ್ ಬಿರೇನ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಳೆ ಬೆಳಗ್ಗೆ 10.30ಕ್ಕೆ ರಾಜಭನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲ ಅವರು ಬಿರೇನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
60 ಮಂದಿ ಸದಸ್ಯಬಲದ ಮಣಿಪುರ ವಿಧಾನಸಭೆಯಲ್ಲಿ ಕಾಂಗ್ರೆಸ್ 28 ಸ್ಥಾನಗಳಲ್ಲಿ, ಬಿಜೆಪಿ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಪಿಪಿ, ಎನ್‌ಪಿಎಫ್, ಎಲ್‌ಜೆಪಿ ಮತ್ತು ಪಕ್ಷೇತರ ಶಾಸಕರೊಬ್ಬರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತಿದೆ.