ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಎನ್ ಪಿಪಿ, ಎನ್ ಪಿಎಫ್
ನ್ಯಾಷಿನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ) ಹಾಗೂ ನಾಗಾ ಪೀಪಲ್ಸ್ ಫ್ರಂಟ್(ಎನ್ ಪಿಎಫ್) ಮಣಿಪುರದಲ್ಲಿ...
ಇಂಫಾಲ್/ಕೋಹಿಮಾ: ನ್ಯಾಷಿನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ) ಹಾಗೂ ನಾಗಾ ಪೀಪಲ್ಸ್ ಫ್ರಂಟ್(ಎನ್ ಪಿಎಫ್) ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬೆಂಬಲ ಘೋಷಿಸಿವೆ.
ಶೀಘ್ರದಲ್ಲಿ ಮಣಿಪುರದಲ್ಲಿ ಕಾಂಗ್ರೆಸೇತರ ಸರ್ಕಾರ ರಚನೆಯಾಗಲಿದೆ ಮತ್ತು ನಮ್ಮ ಪಕ್ಷ ಬಿಜೆಪಿ ನೇತೃತ್ವ ಮೈತ್ರಿಕೂಟ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಎನ್ ಪಿಪಿ ಮುಖ್ಯಸ್ಥ ಕೆ.ಸಂಗ್ಮಾ ಅವರು ಹೇಳಿದ್ದಾರೆ.
ಇನ್ನು ನಾಗಾಲ್ಯಾಂಡ್ ಮುಖ್ಯಮಂತ್ರಿ ಹಾಗೂ ಎನ್ ಪಿಎಫ್ ಮುಖ್ಯಸ್ಥ ಶುರ್ಹೊಝ್ಲೀ ಲೀಝಿತ್ಸು ಅವರು ನೆರೆ ಮಣಿಪುರದಲ್ಲಿ ತಮ್ಮ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಎನ್ಪಿಎಫ್ನ ನಾಲ್ವರು ಶಾಸಕರು ಈಗಾಗಲೇ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರನ್ನು ಭೇಟಿ ಬಿಜೆಪಿ ಬೆಂಬಲ ನೀಡುವುದಾಗಿ ಪತ್ರ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.