ದೇಶ

ಮಣಿಪುರ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕಾರ

Manjula VN
ಇಂಫಾಲ: ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಅವರು ಬುಧವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 
ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಿರೇನ್ ಅವರೊಂದಿಗೆ ಇತರ ಇಬ್ಬರ ಚುನಾಯಿತ ಸದಸ್ಯರಾದ ವಿಶ್ವಜೀತ್ ಸಿಂಗ್ ಮತ್ತು ಜೋಯ್ ಕುಮಾರ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಜೋಯ್ ಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮಣಿಪುರ ರಾಜ್ಯಪಾಲ ನಜ್ಮಾ ಹೆಫ್ತುಲ್ಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. 
ಸಣ್ಣ ಪಕ್ಷಗಳ ಸಹಾಯದೊಂದಿಗೆ ಮಣಿಪುರದಲ್ಲಿ ಬಿಜೆಪಿ ಅಧಿಕಾರ ನಡೆಸಲಿದೆ. 21 ಶಾಸಕರನ್ನು ಹೊಂದಿರುವ ಬಿಜೆಪಿಗೆ ನಾಗಾ ಪೀಪಲ್ಸ್ ಪಾರ್ಟಿ ಮ್ತತು ಲೋಕ ಜನಶಕ್ತಿ ಪಕ್ಷಗಳು ಬೆಂಬಲ ನೀಡಿತ್ತು. 
ನಿನ್ನೆಯಷ್ಟೇ ರಾಜ್ಯಪಾಲ ನಜ್ಮಾ ಹೆಫ್ತುಲ್ಲಾ ಅವರು ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಮೈತ್ರಿಕೂಟಕ್ಕೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಇದರಂತೆ ಇಂದು ಬಿರೇನ್ ಅವರು ಮಣಿಪುರ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದು ಈ ಮೂಲಕ ಮಣಿಪುರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ. 
ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದ ಪರಿಣಾಮವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವರಾದ ವೆಂಕಯ್ಯ ನಾಯ್ಡು ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿರಲಿಲ್ಲ. 
SCROLL FOR NEXT