ದೇಶ

ಪ್ರಧಾನಿ ಮೋದಿ ಭಾರತ-ಪಾಕ್ ಗಡಿ ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸವಿದೆ: ಮೆಹಬೂಬ ಮುಫ್ತಿ

Sumana Upadhyaya
ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಗಡಿ ವ್ಯಾಪಾರವನ್ನು ಭಾರತ ರದ್ದುಪಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾರ್ಗವನ್ನು ಅನುಸರಿಸಿ ಈಗಿನ ಪರಿಸ್ಥಿತಿಯನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
1989ರಿಂದ ಇಲ್ಲಿಯವರೆಗೆ ಪರಿಸ್ಥಿತಿ ಬಹಳ ಕಷ್ಟವಾಗಿದೆ. ಅನೇಕ ಏರಿಳಿತಗಳನ್ನು ಕಂಡಿದ್ದೇವೆ. ಆದರೆ ಎರಡೂ ದೇಶಗಳ ನಡುವಣ ಗಡಿ ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸವಿದೆ. ಪ್ರಧಾನಿ ಮೋದಿಯವರು ವಾಜಪೇಯಿಯವರು ಹಾದಿಯನ್ನು ಅನುಸರಿಸಿ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ನಂಬಿಕೆಯಿದೆ. ವಾಜಪೇಯಿಯವರು ಪ್ರತ್ಯೇಕತಾವಾದಿಗಳು ಮತ್ತು ಪಾಕಿಸ್ತಾನದಲ್ಲಿ ಬಹಳ ಜನಪ್ರಿಯರಾಗಿದ್ದರು ಎಂದು ಹೇಳಿದರು.
SCROLL FOR NEXT