ಜೆಎನ್'ಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಗೆ ಸೀತಾರಾಮನ್ ಸೂಚನೆ 
ದೇಶ

ಜೆಎನ್'ಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಎಫ್ಐಆರ್ ದಾಖಲಿಗೆ ಸೀತಾರಾಮನ್ ಸೂಚನೆ

ಜೆಎನ್'ಯು ವಿದ್ಯಾರ್ಥಿ ಜೆ.ಮುತ್ತು ಕೃಷ್ಣನ್ ಅಲಿಯಾಸ್ ರಜಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾನ್ ಅವರು ದೆಹಲಿ ಪೊಲೀಸರಿಗೆ ಬುಧವಾರ...

ನವದೆಹಲಿ: ಜೆಎನ್'ಯು ವಿದ್ಯಾರ್ಥಿ ಜೆ.ಮುತ್ತು ಕೃಷ್ಣನ್ ಅಲಿಯಾಸ್ ರಜಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾನ್ ಅವರು ದೆಹಲಿ ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ. 
ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಎಸ್'ಸಿ/ಎಸ್'ಟಿ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ಕಾಯಬೇಕಿದೆ ಎಂದು ಹೇಳಿದ್ದಾರೆ. 
ವಿದ್ಯಾರ್ಥಿಗಳ ಆಗ್ರಹದಂತೆ ತನಿಖೆಯಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ. ಪ್ರಕರಣ ಸಂಬಂಧ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಕ್ರಿಶ್ ರಜಿನಿ (ಮುತ್ತು ಕೃಷ್ಣನ್) (25) ಅವರು ನೇಣು ಬಿಗಿದುಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದರು. 
ಆತ್ಮಹತ್ಯೆಗೂ ಮುನ್ನ ಮುತ್ತು ಕೃಷ್ಣ ಅವರು ಇತ್ತೀಚೆಗೆ ಫೇಸ್ ಬುಕ್ ಪುಟದಲ್ಲಿ ವಿಶ್ವವಿದ್ಯಾಲಯದಲ್ಲಿನ ತಾರತಮ್ಯದ ಬಗ್ಗೆ ಬರೆದುಕೊಂಡಿದ್ದರು. ಎಂ.ಫಿಲ್ ಮತ್ತು ಪಿ.ಎಚ್ ಡಿ ಪ್ರವೇಶದಲ್ಲಿ  ತಾರತಮ್ಯ ನೀತಿಯನ್ನು ತೋರಲಾಗುತ್ತಿದೆ. ವೈವಾ ವೋಸ್ ನಲ್ಲಿ ಕೂಡ ಸಮಾನತೆಯಿಲ್ಲ, ಹೀಗೆ ವಿಶ್ವವಿದ್ಯಾಲಯದ ಮೇಲೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕಿದ್ದರು. ಇದನ್ನು ಮೊನ್ನೆ 10ನೇ ತಾರೀಖಿನಂದು ಕೃಷ್ಣನ್ ಪೋಸ್ಟ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!