ಸಂಗ್ರಹ ಚಿತ್ರ 
ದೇಶ

ನೂತನ ಗೋವಾ ಸಿಎಂ ಪರಿಕ್ಕರ್ ಗೆ ಮೊದಲ ಅಗ್ನಿ ಪರೀಕ್ಷೆ; ಬಹುಮತ ಸಾಬೀತಿಗೆ ಕ್ಷಣಗಣನೆ

ಇತ್ತೀಚೆಗೆ ಮುಕ್ತಾಯವಾದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದ ಬಿಜೆಪಿ ಬದಲಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಗೋವಾದಲ್ಲಿ ಸರ್ಕಾರ ರಚನೆ ಮಾಡಿದ್ದು, ಗುರುವಾರ ಸಿಎಂ ಮನೋಹರ್ ಪರಿಕ್ಕರ್ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಪಣಜಿ: ಇತ್ತೀಚೆಗೆ ಮುಕ್ತಾಯವಾದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದ ಬಿಜೆಪಿ ಬದಲಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಗೋವಾದಲ್ಲಿ ಸರ್ಕಾರ ರಚನೆ ಮಾಡಿದ್ದು, ಗುರುವಾರ ಸಿಎಂ  ಮನೋಹರ್ ಪರಿಕ್ಕರ್ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಇಂದು ವಿಶೇಷ ಅಧಿವೇಶನ ನಡೆಯಲಿದ್ದು, ವಿಧಾನಸಭೆಯಲ್ಲಿ ನೂತನ ಸಿಎಂ ಮನೋಹರ್ ಪರಿಕ್ಕರ್ ಅವರು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ, ಪರಿಕ್ಕರ್ ಸರ್ಕಾರ ಉಳಿಯಲು ಅವರಿಗೆ 21  ಶಾಸಕರ ಬೆಂಬಲ ಅನಿವಾರ್ಯವಾಗಿದೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನ ಪಡೆದು ಅಗ್ರ ಸ್ಥಾನದಲ್ಲಿದ್ದರೆ, 13 ಸ್ಥಾನಗಳನ್ನು ಗೆದ್ದ ಬಿಜೆಪಿ 2ನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಪಕ್ಷೇತರರ ಬೆಂಬಲ ಪಡೆಯುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದ್ದು,  ಪರಿಸ್ಥಿತಿ ಲಾಭ ಪಡೆದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರದಿಂದ ದೂರ ಇಡುವಲ್ಲಿ ಯಶಸ್ವಿಯಾಗಿದೆ. ಒಟ್ಟು 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು 21 ಸ್ಥಾನಗಳ ಅಗತ್ಯ ಇತ್ತು. 13 ಸ್ಥಾನ  ಪಡೆದಿದ್ದ ಬಿಜೆಪಿ 7 ಪಕ್ಷೇತರರ ಬೆಂಬಲ ಪಡೆದಿದೆ. ಅಂತೆಯೇ ಓರ್ವ ಕಾಂಗ್ರೆಸ್ ಶಾಸಕ ಬಿಜೆಪಿಗೆ ಹಾರಿದ್ದು, ಇದರಿಂದ ಕಾಂಗ್ರೆಸ್ ಸಂಖ್ಯಾ ಬಲ 16ಕ್ಕೆ ಕುಸಿದಿದೆ.

ಇನ್ನು ಪಕ್ಷೇತರ ಶಾಸಕರಾದ ಗೋವಿಂದ್ ಗುಡೆ ಹಾಗೂ ರೋಹನ್ ಕೌಂಟೆ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಚರ್ಚಿಸುತ್ತಿದ್ದಾರೆ ಎಂಬ ಊಹಾಪೋಹಗಳು ಸುಳಿದಾಡುತ್ತಿರುವ ಬೆನ್ನಲ್ಲೇ ನಿನ್ನೆ ಸ್ಪಷ್ಟನೆ ನೀಡಿದ್ದ ಶಾಸಕರು ತಾವು  ಈಗಾಗಲೇ ಮನೋಹರ್ ಪರಿಕ್ಕರ್ ಅವರಿಗೆ ಬೆಂಬಲ ನೀಡಿದ್ದು, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೊದಲ ಸ್ಥಾನದಲ್ಲಿದ್ದರೂ ಸರ್ಕಾರ ರಚನೆ ಮಾಡಲಾಗದೇ ಕೈ ಕೈ ಹಿಸುಕಿಕೊಳ್ಳುತ್ತಿರುವ ಕಾಂಗ್ರೆಸ್
ಇನ್ನು ಚುನಾವಣೆಯಲ್ಲಿ ಅತೀ ಹೆಚ್ಚು ಅಂದರೆ 17 ಸ್ಥಾನಗಳಿಸಿ ಅಗ್ರ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷೇತರರ ಬೆಂಬಲ ಪಡೆದು ಸರ್ಕಾರ ರಚಿಸುವ ಕನಸು ಕಾಣುತ್ತಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿ ಹಾಗೂ ತನ್ನದೇ ಶಾಸಕರ  ಬಂಡಾಯದಿಂದಾಗಿ ಕಾಂಗ್ರೆಸ್ ಇದೀಗ ಮೊದಲ ಸ್ಥಾನದಲ್ಲಿದ್ದರೂ ಸರ್ಕಾರ ರಚನೆ ಮಾಡಲಾಗದೇ ಕೈ ಕೈ ಹಿಸುಕಿಕೊಳ್ಳುತ್ತಿದೆ. ಈಗಾಗಲೇ ಎಂಜಿಪಿ ಮತ್ತು ಗೋವಾ ಫಾರ್ವರ್ಡ್ ಪಕ್ಷಗಳು ರಾಜ್ಯಪಾಲರಿಗೆ ಮನೋಹರ್ ಪರಿಕ್ಕರ್  ಅವರಿಗೆ ತಮ್ಮ ಬೆಂಬಲ ಸೂಚಿಸಿ ಪತ್ರ ನೀಡಿದ್ದು, ಇದೀಗ ಮತ್ತೆ ಐದು ವರ್ಷಗಳ ಕಾಲ ಕಾಂಗ್ರೆಸ್ ವಿಪಕ್ಷದಲ್ಲಿ ಕೂರುವಂತಾಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲಿರಿತ್ತಾದರೂ, ಸುಪ್ರೀಂ ಕೋರ್ಟ್ ಕೂಡ  ವಿಶ್ವಾಸ ಮತ ಯಾಚನೆ ಮಾಡಿ ಬೆಂಬಲ ಸಾಬೀತು ಪಡೆಸುವಂತೆ ಪರಿಕ್ಕರ್ ಅವರಿಗೆ ನಿರ್ದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ