ದೇಶ

ಇವಿಎಂ ಗೋಲ್'ಮಾಲ್ ಆರೋಪ: ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದೆ- ಬಿಜೆಪಿ

Manjula VN
ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇವಿಎಂ (ವಿದ್ಯುನ್ಮಾನ ಮತ ಯಂತ್ರ)ನಲ್ಲಿ ಗೋಲ್'ಮಾಲ್ ನಡೆಸಿದೆ ಎಂದು ಆರೋಪ ಮಾಡುತ್ತಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಚಿಕಿತ್ಸೆಯ ಅಗತ್ಯವಿದ್ದು, ಆಸ್ಪತ್ರೆಗೆ ದಾಖಲಾಗಬೇಕಿದೆ ಎಂದು ಬಿಜೆಪಿ ಗುರುವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು, ಮಾಯಾವತಿಯವರು ನ್ಯಾಯಾಲಯಕ್ಕೆ ಹೋಗುತ್ತಾರೋ ಬಿಡುತ್ತಾರೋ ಅದರ ಬಗ್ಗೆ ನನಗೆ ಯೋಚನೆಯಿಲ್ಲ. ಆದರೆ, ಯಾವುದೇ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಮಾಯಾವತಿಯವರು ಮೊದಲು ಆಸ್ಪತ್ರೆಗೆ ಭೇಟಿ ನೀಡಬೇಕಿದೆ. ಆದರೆ, ಅವರಿಗೆ ಚಿಕಿತ್ಸೆಯ ಅಗತ್ಯವಿಲೆ ಎಂದು ಹೇಳಿದ್ದಾರೆ. 
ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ನಿನ್ನಯಷ್ಟೇ ಪ್ರತಿಕ್ರಿಯೆ ನೀಡಿದ್ದ ಮಾಯಾವತಿಯವರು, ಇವಿಎಂ (ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಬಿಜೆಪಿ ಭಾರೀ ಗೋಲ್ ಮಾಲ್ ನಡೆಸಿದೆ.  ಬಿಜೆಪಿ ಅಪ್ರಮಾಣಿಕ ಹಾಗೂ ಮೋಸದಿಂದ ಗೆಲವು ಸಾಧಿಸಿದೆ. ಜಾಪ್ರಭುತ್ವವನ್ನು ರಕ್ಷಣೆ ಮಾಡುವ ಸಲುವಾಗಿ ನಾವು ನ್ಯಾಯಾಲಯ ಮೆಟ್ಟಿಲೇರಲು ನಿರ್ಧಾರ ಕೈಗೊಂಡಿದ್ದೇವೆಂದು ಹೇಳಿದ್ದರು. 
SCROLL FOR NEXT