ದೇಶ

ಗೋವಾದಲ್ಲಿ ಕಾಂಗ್ರೆಸ್ ಸೋಲಿಗೆ ನನ್ನನ್ನು ಖಳನಾಯಕನಂತೆ ಬಿಂಬಿಸಲಾಗುತ್ತಿದೆ: ದಿಗ್ವಿಜಯ್ ಸಿಂಗ್

Shilpa D

ಪಣಜಿ:  ಗೋವಾದಲ್ಲಿ ಕಾಂಗ್ರೆಸ್ ಸೋಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಬೇಸರ ವ್ಯಕ್ತ ಪಡಿಸಿದ್ದಾರೆ, ಈ ಸಂಬಂಧ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಗೋವಾದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ನಾನು ನೀಡಿದ್ದ ಸಲಹೆಯನ್ನು ಒಪ್ಪಿಕೊಳ್ಳಲಿಲ್ಲ, ಹಾಗಾಗಿ ಗೋವಾದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ ಎಂದು ದಿಗ್ವಿಜಯ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ದಿಗ್ವಿಜಯ್ ಸಿಂಗ್ ಅವರನ್ನು ಖಳನಾಯಕರಂತೆ ಬಿಂಬಿಸಲಾಗುತ್ತಿದೆ ಎಂದು ಟ್ವೀಟಿಸಿದ್ದಾರೆ. .

ಗೋವಾದ ಸ್ಥಳೀಯ ಪಕ್ಷಗಳಾದ ಬಾಬುಷ್ ನೇತೃತ್ವದ ಯುನೈಟೆಡ್ ಗೋವನ್ ಪಾರ್ಟಿ ಮತ್ತು ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದೆ. ಆದರೆ ರಾಷ್ಟ್ರೀಯ ನಾಯಕರು ಜಿಎಫ್​ಪಿಯೊಂದಿಗೆ ಮೈತ್ರಿ ಬೇಡ ಎಂದರು. ಜಿಎಫ್​ಇ ಚುನಾವಣೆಯಲ್ಲಿ 4 ರಲ್ಲಿ 3 ಸ್ಥಾನ ಪಡೆದಿತ್ತು. ನಾವು ಮೈತ್ರಿ ಮಾಡಿಕೊಂಡಿದ್ದರೆ 22 ಸದಸ್ಯ ಬಲದೊಂದಿಗೆ ಸುಲಭವಾಗಿ ಅಧಿಕಾರಕ್ಕೆ ಬರಬಹುದಿತ್ತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

SCROLL FOR NEXT