ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ
ನವದೆಹಲಿ: ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದೇನೆಂದು ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಶುಕ್ರವಾರ ಹೇಳಿದ್ದಾರೆ.
ಅತೀಯಾದ ರಕ್ತದೊತ್ತಡ ಸಮಸ್ಯೆಯಿಂದಾಗಿ ಕೇಶವ್ ಪ್ರಸಾದ್ ಮೌರ್ಯ ಅವರು ನಿನ್ನೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತಂತೆ ಉಂಟಾಗಿರುವ ಗೊಂದಲ ಮಧ್ಯೆಯೇ ಕೇಶವ್ ಆವರು ಆಸ್ಪತ್ರೆಗೆ ದಾಖಲಾಗಿದ್ದು ಹಲವರಲ್ಲಿ ಆತಂಕ ಸೃಷ್ಟಿಸಿತ್ತು.
ಇದೀಗ ತಮ್ಮ ಆರೋಗ್ಯ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಶವ್ ಪ್ರಸಾದ್ ಮೌರ್ಯ ಅವರು, ನಾನು ಸಂಪೂರ್ಣವಾಗಿ ಆರೋಗ್ಯಯುತನಾಗಿದ್ದೇನೆ. ನನ್ನ ಉಳಿತನ್ನು ಬಯಸುವವವರಿಗೆ ಈ ಮೂಲಕ ವಿಷಯ ತಿಳಿಸಲು ಇಚ್ಛಿಸುತ್ತಿದ್ದೇನೆ. ನಾನು ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಮನೆಗೆ ಬಂದಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಯಾರೂ ಚಿಂತೆ ಮಾಡುವ ಅಗತ್ಯವಿಲ್ಲ. ನನ್ನ ಆರೋಗ್ಯಕ್ಕಾಗಿ ಹಾರೈಸಿದ ಪ್ರತೀಯೊಬ್ಬರಿಗೂ ಧನ್ಯವಾದ ತಿಳಿಸುತ್ತಿದ್ದೇನೆಂದು ಹೇಳಿದ್ದಾರೆ.