ತ್ರಿವೇಂದ್ರ ಸಿಂಗ್ ರಾವತ್ 
ದೇಶ

ನಾಳೆ ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣ

ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಅವರು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು,....

ಡೆಹ್ರಾಡೂನ್: ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಅವರು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ನಾಳೆ ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೇಂದ್ರ ನಾಯಕರಾದ ಸರೋಜ್ ಪಾಂಡೇ ಹಾಗೂ ನರೇಂದ್ರ ತೋಮರ್ ಅವರ ಉಸ್ತುವಾರಿಯಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾವತ್ ಸೇರಿದಂತೆ ಸತ್ಯಪಾಲ್ ಮಹಾರಾಜ್ ಹಾಗೂ ಪ್ರಕಾಶ್ ಪಂತ್ ಅವರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಆದರೆ ಅಂತಿಮವಾಗಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು, ರಾವತ್ ಅವರು ಆರ್ಎಸ್ಎಸ್ ಸ್ವಯಂ ಸೇವಕರಾಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಆಪ್ತರಾಗಿದ್ದಾರೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಉತ್ತರಾಖಂಡ್ ಬಿಜೆಪಿ ಅಧ್ಯಕ್ಷ ಅಜಯ್ ಭಟ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT