ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಟಿ ಐಶ್ವರ್ಯ ರೈ ಅವರ ತಂದೆ ಕೃಷ್ಣರಾಜ್ ರೈ ಶನಿವಾರ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿರುವ ಕೃಷ್ಣರಾಜ್ ರೈ ಅವರನ್ನು ಕಳೆದ ಎರಡು ವಾರಗಳ ಹಿಂದೆ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಇತ್ತೀಚಗಷ್ಟೆ ನಟಿ ಐಶ್ವರ್ಯಾ ರೈ ಹಾಗೂ ಆಕೆಯ ಪತಿ ಅಭಿಷೇಕ್ ಬಚ್ಚನ್ ಅವರು ಲೀಲಾವತಿ ಆಸ್ಪತ್ರೆಗೆ ತೆರಳಿ ಕೃಷ್ಣರಾಜ್ ರೈ ಅವರ ಆರೋಗ್ಯ ವಿಚಾರಿಸಿದ್ದರು.