ಬಿಜೆಪಿ ನಾಯಕ ಗಿರಿರಾಜ್ ಸಿಂಗ್ 
ದೇಶ

ಗೋವಾ ಗೆಲುವಿಗೆ ಕಾರಣರಾದ 'ಪಕ್ಷದ ಕಾರ್ಯಕರ್ತ' ರಾಹುಲ್, ದಿಗ್ವಿಜಯ್'ಗೆ ಧನ್ಯವಾದ: ಗಿರಿರಾಜ್ ಸಿಂಗ್

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ...

ಮುಂಬೈ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ. 
ಗೋವಾ ಗೆಲವು ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್ ಅವರು, ಗೋವಾದಲ್ಲಿ ಬಹುಮತ ಸಾಬೀತು ಪಡಿಸಿರುವ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿದೆ ಅಭಿನಂದನೆಗಳು. ಮತ್ತು ನಮ್ಮ ಗೆಲವಿಗೆ ಕಾರಣರಾದ 'ಬಿಜೆಪಿ ಕಾರ್ಯಕರ್ತ'ರಾದ ರಾಹುಲ್ ಗಾಂಧಿ ಹಾಗೂ ದಿಗ್ವಿಜಯ್ ಸಿಂಗ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದರು. ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಪರಿಕ್ಕರ್ ಅವರಿಗೆ 22 ಶಾಸಕರು ಬೆಂಬಲ ಸೂಚಿಸಿದ್ದರೆ, 16 ಶಾಸಕರು ವಿರೋಧ ವ್ಯಕ್ತಪಡಿಸಿದ್ದರು ಮತ್ತು ಓರ್ವ ಶಾಸಕರು ಮತದಾನ ಪ್ರಕ್ರಿಯೆಗೆ ಗೈರು ಹಾಜರಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT