ದೇಶ

ದೇಶಾದ್ಯಂತ ಇರುವ ಮದ್ರಾಸಾಗಳಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ: ನಕ್ವಿ

Shilpa D

ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಎಲ್ಲಾ ಮದ್ರಸಾಗಳಲ್ಲಿ 2 ಲಕ್ಷ ಶೌಚಾಲಯ ನಿರ್ಮಿಸುವುದಾಗಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

2014ರ ಅಕ್ಟೋಬರ್ 2 ರಂದು  ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಸಾರ್ವತ್ರಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಕೇಂದ್ರೀಕರಿಸಲು  ಹಾಗೂ ಬಯಲು ಮುಕ್ತ ಶೌಚಕ್ಕಾಗಿ ಇದುವರೆಗೂ 174,828 ಶೌಚಾಲಯಗಳನ್ನು ನಿರ್ಮಿಸಲಾಗಿದೆ. 3,246 ಗ್ರಾಮಗಳು ಹಾಗೂ 118 ಜಿಲ್ಲೆಗಳು ಇದರ ವ್ಯಾಪ್ತಿಗೆ ಒಳಪಟ್ಟಿವೆ ಎಂದು ಅವರು ತಿಳಿಸಿದ್ದಾರೆ.

ಇನ್ನೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸುತ್ತಿರುವುದಾಗಿ ಹೇಳಿರುವ ಅವರು, 3ಟಿ ಫಾರ್ಮುಲ ಅಡಿಯಲ್ಲಿ ಶಿಕ್ಷಕರ ಕೌಶಲ್ಯ ಮಟ್ಟ, ಊಟ ಮತ್ತು ಶೌಚಾಲಯ ವ್ಯವಸ್ಥೆ ನಿರ್ಮಿಸಲು ಚಿಂತಿಸುತ್ತಿರುವುದಾಗಿ ಹೇಳಿದ್ದಾರೆ.

SCROLL FOR NEXT