ಜಯಲಲಿತಾ ಸೊಸೆ ದೀಪಾ ಜಯಕುಮಾರ್ ಗೆ ಹಿನ್ನಡೆ: ಪಕ್ಷ ತೊರೆದ ಪತಿ ಮಾಧವನ್
ಎಂಜಿಆರ್ ಅಮ್ಮಾ ದೀಪಾ ಪೆರವೈ ಪಕ್ಷ ತೊರೆಯುವ ಮೂಲಕ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಗೆ ...
ಚೆನ್ನೈ: ಎಂಜಿಆರ್ ಅಮ್ಮಾ ದೀಪಾ ಪೆರವೈ ಪಕ್ಷ ತೊರೆಯುವ ಮೂಲಕ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಗೆ ಆಕೆಯ ಪತಿ ಮಾಧವನ್ ಆಘಾತ ನೀಡಿದ್ದಾರೆ.
ಜಯಲಲಿತಾ ಅವರ 69ನೇ ಹುಟ್ಟು ಹಬ್ಬದ ಕಾರ್ಯಕ್ರಮದ ವೇಳೆ ದೀಪಾ ಎಂಜಿಆರ್ ಅಮ್ಮಾ ದೀಪಾ ಪೆರವೈ ಎಂಬ ಪಕ್ಷ ಸ್ಥಾಪಿಸಿದ್ದರು. ಈ ವೇಳೆ ದೀಪಾ ಪತ ಮಾಧವನ್ ಕೂಡ ಜೊತೆಗಿದ್ದರು.
ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಧವನ್ ಪಕ್ಷ ತೊರೆದಿದ್ದು,ಹೊಸದೊಂದು ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದಾರೆ. ಪಕ್ಷದಲ್ಲಿರುವ ಕೆಲವು ಕೆಟ್ಟ ಶಕ್ತಿಗಳು ಸ್ವತಂತ್ರ್ಯವಾಗಿ ಕೆಲಸ ಮಾಡಲು ಬಿಡುವುದಿಲ್ಲ ಎಂದು ಹೇಳಿರುವ ಅವರು, ದೀಪಾ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಯಲಲಿತಾ ಸಮಾಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ವಿಷಯ ತಿಳಿಸಿದ ಮಾಧವನ್ ಶೀಘ್ರವೇ ಅವರ ಹೊಸ ಪಕ್ಷದ ಹೆಸರನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.