ದೇಶ

ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲೀಕ್ ಬಂಧನ

Srinivas Rao BV
ಶ್ರೀನಗರ: ಜಮ್ಮು-ಕಾಶ್ಮೀರ ಪ್ರತ್ಯೇಕತಾವಾದಿ, ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್ ನ ಮುಖ್ಯಸ್ಥ ಮೊಹಮ್ಮದ್ ಯಾಸೀನ್ ಮಲೀಕ್ ನ್ನು ಬಂಧಿಸಲಾಗಿದೆ. 
ಚುನಾವಣೆಯನ್ನು ಬಹಿಷ್ಕರಿಸುವ ಅಭಿಯಾನದ ನೇತೃತ್ವ ವಹಿಸಿದ್ದ ಯಾಸೀನ್ ಮಲೀಕ್ ನಿವಾಸದ ಮೇಲೆ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಬಂಧಿಸಿದೆ ಎಂದು ಜೆಕೆಎಲ್ಎಫ್ ನ ವಕ್ತಾರರೊಬ್ಬರು ಹೇಳಿದ್ದಾರೆ. 
ಪ್ರತ್ಯೇಕತಾವಾದಿ ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಷಾ ಗಿಲಾನಿಯ ಸಂಘಟನೆಯ ಬೆಂಬಲಿತ ಸಂಘಟನೆಯ ಮುಖಂಡನಾಗಿರುವ ಮೊಹಮ್ಮದ್ ಯಾಸೀನ್ ಮಲೀಕ್ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಚುನಾವಣೆ ಬಹಿಷ್ಕರಿಸುವ ಅಭಿಯಾನಕ್ಕೆ ಚಾಲನೆ ನೀಡಿ ಬುದ್ಗಾಮ್ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚಿ ಮುಂದಿನ ಚುನಾವಣೆಯನ್ನು ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿದ್ದರು. 
ಏ.9 ಹಾಗೂ ಏ.12 ರಂದು ಶ್ರೀನಗರ, ಅನಂತ್ ನಾಗ್ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಚುನಾವಣೆಯನ್ನು ಬಹಿಷ್ಕರಿಸುವಂತೆ ಪ್ರತ್ಯೇಕತಾವಾದಿ ನಾಯಕರು ಅಭಿಯಾನ ಪ್ರಾರಂಭಿಸಿದ್ದಾರೆ. ಯಾಸೀನ್ ಮಲೀಕ್ ಈ ಅಭಿಯಾನದಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. 
SCROLL FOR NEXT