ದೇಶ

ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ ಸ್ವೀಕಾರ

Lingaraj Badiger
ಡೆಹ್ರಾಡೂನ್: ಉತ್ತರಾಖಂಡ್ ನೂತನ ಮುಖ್ಯಮಂತ್ರಿಯಾಗಿ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ತ್ರಿವೇಂದ್ರ ಸಿಂಗ್ ರಾವತ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ನಿನ್ನೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ಅವರು ಇಂದು ಉತ್ತರಾಂಖಡ್ ನ 9ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ಡೆಹ್ರಾಡೂನ್ ನ ಪರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾವತ್ ಅವರಿಗೆ ರಾಜ್ಯಪಾಲ ಕೃಷ್ಣಕಾಂತ್ ಪಾಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಹರಿಶ್ ರಾವತ್ ಸೇರಿದಂತೆ ಹಲವು ಗಣ್ಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ರಾವತ್ ಸೇರಿದಂತೆ ಸತ್ಯಪಾಲ್ ಮಹಾರಾಜ್ ಹಾಗೂ ಪ್ರಕಾಶ್ ಪಂತ್ ಅವರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಆದರೆ ಅಂತಿಮವಾಗಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು, ರಾವತ್ ಅವರು ಆರ್ಎಸ್ಎಸ್ ಸ್ವಯಂ ಸೇವಕರಾಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಆಪ್ತರಾಗಿದ್ದಾರೆ.
SCROLL FOR NEXT