ಆಗ್ರಾ: ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಅವಳಿ ಸ್ಫೋಟ 
ದೇಶ

ಆಗ್ರಾ: ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಅವಳಿ ಸ್ಫೋಟ

ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಮಾ.18 ರಂದು ಕಡಿಮೆ ತೀವ್ರತೆಯ ಅವಳಿ ಬಾಂಬ್ ಸ್ಫೋಟ ಸಂಭವಿಸಿದೆ.

ಆಗ್ರಾ: ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಮಾ.18 ರಂದು ಕಡಿಮೆ ತೀವ್ರತೆಯ ಅವಳಿ ಬಾಂಬ್ ಸ್ಫೋಟ ಸಂಭವಿಸಿದೆ. 
ಅಂಡಮಾನ್ ಎಕ್ಸ್`ಪ್ರೆಸ್ ಹಳಿ ತಪ್ಪಿಸಲು ಯತ್ನ ನಡೆದಿದೆ ಎಂಬ ವರದಿಗಳ ಬೆನ್ನಲ್ಲೇ ಪೊಲೀಸರಿಗೆ ಭಯೋತ್ಪಾದಕ ದಾಳಿಯ ಕುರಿತಂತೆ ಮಾಹಿತಿ ದೊರೆತಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಅವಳಿ ಸ್ಫೋಟ್ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿ ಉಂಟಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಬೆಳಿಗ್ಗೆ ಅವಳಿ ಸ್ಫೋಟ ಸಂಭವಿಸಿರುವುದರ ಬಗ್ಗೆ ವಿಧಿ ವಿಜ್ಞಾನ ಪ್ರಯೋಗಾಲದ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ಗೆ ಕಸವನ್ನು ತುಂಬಿಸುತ್ತಿರಬೇಕಾದರೆ ಸ್ಫೋಟದ ಶಬ್ದ ಕೇಳಿಸಿದ್ದು ಪೊಲೀಸ್ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ. 
ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ 20 ಕಿಮೀ ದೂರದಲ್ಲಿರುವ ಮತ್ತೊಂದು ರೈಲು ನಿಲ್ದಾಣದಲ್ಲಿ ಭಯೋತ್ಪಾದಕ ದಾಳಿ ನಡೆಸುವುದರ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ಸಂದೇಶ ಇರುವ ಪತ್ರ ದೊರೆತಿತ್ತು. ಇದಾದ ಕೆಲವೇ ಗಂಟೆಗಳಲ್ಲಿ  ಫ್ಲಾಟ್ ಫಾರಂ 5ರ ಬಳಿಯ ಕಸ ವಿಲೇವಾರಿ ಮಾಡುತ್ತಿರಬೇಕಾದರೆ ಸ್ಫೋಟ ಸಂಭವಿಸಿದೆ. ಈ ಘಟನೆ ಸಂಭವಿಸುವುದಕ್ಕೂ ಮುನ್ನ ತಾಜ್ ಮಹಲ್ ನ್ನು ಗುರಿಯಾಗಿರಿಸಿಕೊಂಡು ಇಸ್ಲಾಮಿಕ್ ಉಗ್ರ ಸಂಘಟನೆಯ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

1,322 ಕೋಟಿ ರೂ. ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ