ಕೊಯಮತ್ತೂರು: ಪ್ರಬಲ ಹಿಂದುತ್ವವಾದಿ ಸಂಸದ ಯೋಗಿ ಆದಿತ್ಯನಾಥ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದರ ಹಿಂದೆ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ಪಾತ್ರವಿಲ್ಲ ಎಂದು ಸಹ ಕಾರ್ಯವಾಹ ಭಾಗಯ್ಯ ಸ್ಪಷ್ಟಪಡಿಸಿದ್ದಾರೆ.
ಯೋಗಿ ಆದಿತ್ಯನಾಥ ಅವರ ಹೆಸರನ್ನು ಆಯ್ಕೆ ಮಾಡಿರುವುದು ಸಂಘ ಪರಿವಾರ ಎಂಬ ಆರೋಪಗಳನ್ನು ಕೇಳಿಬಂದ ಹಿನ್ನೆಲೆಯಲ್ಲಿ ಭಾಗಯ್ಯ ಅವರು ಇದೊಂದು ರಾಜಕೀಯ ನಿರ್ಧಾರವಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಆಯ್ಕೆ ವಿಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಉತ್ತರಾಖಂಡ ಮುಖ್ಯಮಂತ್ರಿ ಹುದ್ದೆಗೇರಿದ ತ್ರಿವೇಂದ್ರ ಸಿಂಗ್ ರಾವತ್ ಕೂಡ ಆರ್ಎಸ್ಎಸ್ ಕಾರ್ಯಕರ್ತರಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಕೂಡ ಸಂಘಪರಿಹಾರದ ಕಾರ್ಯಕರ್ತರು ಎಂದು ಉತ್ತರಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ರೇಸ್ ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಕೇಶವ ಪ್ರಸಾದ್ ಮೌರ್ಯ, ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿದ್ದವು. ಆದರೆ ದಿಢೀರ್ ಅಂತ ಯೋಗಿ ಆದಿತ್ಯನಾಥ ಅವರನ್ನು ಆಯ್ಕೆ ಮಾಡುವಲ್ಲಿ ಆರ್ಎಸ್ಎಸ್ ಪಾತ್ರವೇ ಪ್ರಮುಖ ಎಂಬ ವದಂತಿಗಳು ಹರಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics