ನವದೆಹಲಿ: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಾ.18 ರಂದು ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಅನಿರೀಕ್ಷಿತ ಘೋಷಣೆ ಮಾಡಿದ ಬೆನ್ನಲ್ಲೇ ಟ್ವಿಟರ್ ನಲ್ಲಿ ಟ್ರೆಂಡಿಂಗ್ ಪ್ರಾರಂಭವಾಗಿದೆ.
ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ನೂತನ ಸಿಎಂ ಎಂದು ಘೋಷಣೆಯಾದ ಬೆನ್ನಲ್ಲೇ ಟ್ವಿಟರ್ ನಲ್ಲಿ ವಿಕಾಸ್ ಪಥ್ ಪೇ ಯೋಗಿ (ವಿಕಾಸದ ಪಥದಲ್ಲಿ ಯೋಗಿ) ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ಟ್ರೆಂಡಿಂಗ್ ವಿಷಯವನ್ನಾಗಿಸಲಾಗಿದೆ.
ಈಗಲೂ ಟ್ವಿಟರ್ ನಲ್ಲಿ ವಿಕಾಸ್ ಪಥ್ ಪೇ ಯೋಗಿ ಟ್ರೆಂಡಿಂಗ್ ವಿಷಯವಾಗಿದ್ದು, ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿರುವ ಬಗ್ಗೆ ಚರ್ಚೆ ನಡೆಯುತ್ತಿದೆ.