ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮೂರು ಮೊಬೈಲ್ ಫೋನ್ ಗಳನ್ನು ಕಳುವು ಮಾಡಿದ್ದ ವ್ಯಕ್ತಿಯ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹೋಟೆಲ್ ಒಂದರಲ್ಲಿ ಐಫೋನ್ ಸೇರಿದಂತೆ ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿದೆ ಎಂದು ಮಹೇಂದ್ರ ಸಿಂಗ್ ಧೋನಿ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾರತದ ತಂಡ ಮಾಜಿ ನಾಯಕ ಎಂ.ಎಸ್.ಧೋನಿ ಮತ್ತು ಜಾರ್ಖಂಡ್ ತಂಡ ವಾಸ್ತವ್ಯ ಹೂಡಿದ್ದ ದ್ವಾರಕಾದ ವೆಲ್'ಕಮ್ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ನಡೆದ ತೆರವು ಕಾರ್ಯಾಚರಣೆ ವೇಳೆಯಲ್ಲಿ ಮೊಬೈಲ್ ಕಳುವಾಗಿದೆ ಎಂದು ಧೋನಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದರು.
ಬೆಂಕಿಯನ್ನು ನಂದಿಸಿದ ನಂತರ ವಾಪಸ್ ರೂಮಿಗೆ ತೆರಳಿ ನೋಡಿದರೆ ಮೊಬೈಲ್ ಫೋನ್ ಕಳುವಾಗಿರುವುದು ಕಂಡುಬಂದಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.