ಯೋಗಿ ಆದಿತ್ಯನಾಥ್ ಅವರ ಪೂರ್ವಾಶ್ರಮದ ತಂದೆ 
ದೇಶ

ಯೋಗಿ ಆದಿತ್ಯನಾಥ್ ಪೂರ್ವಾಶ್ರಮದ ಕುಟುಂಬದಲ್ಲಿ ಮನೆಮಾಡಿದ ಸಂತಸ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ...

ಪಂಚೂರ್(ಉತ್ತರಾಖಂಡ): ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಅವರ ಪೂರ್ವಾಶ್ರಮದ ತಂದೆ ಹಾಗೂ ಕುಟುಂಬದವರು ಸಂತೋಷಗೊಂಡಿದ್ದಾರೆ.
''ಬಾಲ್ಯದಿಂದಲೂ ಅವರಿಗೆ ಉನ್ನತವಾದ ಉದ್ದೇಶ, ಗುರಿಯಿತ್ತು. ಜನರ ಸೇವೆ ಮಾಡಬೇಕೆಂಬ ಆಕಾಂಕ್ಷೆಯಿತ್ತು. ಇಂದು ಮುಖ್ಯಮಂತ್ರಿಯಾಗಿದ್ದಾರೆ. ನನಗೆ ಈ ಸಂದರ್ಭದಲ್ಲಿ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ಇದುವರೆಗೆ ಅವರು ತೆಗೆದುಕೊಂಡ ನಿರ್ಧಾರಗಳೆಲ್ಲವೂ ಸರಿಯಾಗಿದೆ. ನಾನು ಅವರ ಪರವಾಗಿ ನಿಲ್ಲುತ್ತೇನೆ. ನನಗೆ ಈಗ ಬಹಳ ಪುಳಕಿತವಾಗುತ್ತಿದೆ ಎಂದು ಆದಿತ್ಯನಾಥ್ ಅವರ ತಂದೆ ಆದಿತ್ಯನಾಥ್ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಆದಿತ್ಯನಾಥ್ ಅವರ ಪೂರ್ವಾಶ್ರಮದ ಸೋದರಿ ಕೂಡ ಹರ್ಷ ವ್ಯಕ್ತಪಡಿಸಿದ್ದು ತಮ್ಮ ಸೋದರನಿಗೆ ಶುಭಾಶಯ ತಿಳಿಸಿದ್ದಾರೆ. ನಾವು ನಿನ್ನೆಯಿಂದ ಟಿವಿ ಮುಂದೆ ಕುಳಿತಿದ್ದೇವೆ. ಪಟಾಕಿಗಳನ್ನು ಸಿಡಿಸಿ, ಸಿಹಿತಿಂಡಿ ಹಂಚಿ ಸಂತೋಷಪಟ್ಟಿದ್ದೇವೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT