ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

'ಯೋಗಿ' ನೇತೃತ್ವದಲ್ಲಿ ಉತ್ತರಪ್ರದೇಶ ಉತ್ತಮ ಪ್ರದೇಶವಾಗಲಿದೆ: ಪ್ರಧಾನಿ ಮೋದಿ

ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದಾರೆ...

ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಯೋಗಿ ಆದಿತ್ಯನಾಥ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದಾರೆ. 
ಹಿಂದುತ್ವದ ಕಟ್ಟಾ ಪ್ರತಿಪಾಕದರಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದಕ್ಕೆಸ ಮಾಜದ ವಿವಿಧ ವಲಯಗಳಿಂದ ಅಕ್ಷೇಪ ಹಾಗೂ ಆಂತಕಗಳು ವ್ಯಕ್ತವಾದ ಬೆನ್ನಲ್ಲೇ, ಯೋಗಿ ಆದಿತ್ಯನಾಥ್ ಅವರಿದೆ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 
ಯೋಗಿ ಆದಿತ್ಯನಾಥ್, ಕೇಶವ್ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾ ಅವರಿಗೆ ಅಭಿನಂದನೆಗಳು ಹಾಗೂ ಯಾರೆಲ್ಲಾ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೋ ಎಲ್ಲರಿಗೂ ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ. 
ಉತ್ತರಪ್ರದೇಶ ಉತ್ತಮ ಪ್ರದೇಶವಾಗುತ್ತದೆ ಎಂಬ ವಿಶ್ವಾಸ ನನಗಿದೆ. ಈ ಅಭಿವೃದ್ಧಿ ದಾಖಲೆ ಬರೆಯುವ ವಿಶ್ವಾಸವಿದೆ. ನಮ್ಮ ಗುರಿ ಮತ್ತು ಉದ್ದೇಶ ಉತ್ತರಪ್ರದೇಶದ ಅಭಿವೃದ್ಧಿ ಹಾಗೂ ರಾಜ್ಯವನ್ನು ಉತ್ತಮ ಪ್ರದೇಶವನ್ನಾಗಿ ಮಾಡುವುದಾಗಿದೆ. ಉತ್ತರಪ್ರದೇಶ ಅಭಿವೃದ್ಧಿಯಾದರೆ ಭಾರತ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!