ನವದೆಹಲಿ: ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು, ಯೋಗಿ ಆದಿತ್ಯನಾಥ್ ಅವರು ರಾಜ್ಯವನ್ನು ಕೋಮು ಆಧಾರದ ಮೇಲೆ ರಾಜ್ಯ ವಿಭಜನೆ ಮಾಡಿ, ರಾಜ್ಯದಲ್ಲಿ ಆರ್ಎಸ್ಎಸ್ ಅಜೆಂಡಾಗೆ ಪ್ರಾಮುಖ್ಯತೆ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಜೆಪಿ ಸರ್ಕಾರದಿಂದ ಸಾಧ್ಯವಿಲ್ಲ ಎಂದಿರುವ ಮಾಯಾವತಿ, ರಾಜ್ಯದಲ್ಲಿ ಎಸ್ಪಿ ಅಥವಾ ಬಿಜೆಪಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಿಲ್ಲ. ಬಿಜೆಪಿ ಒಬ್ಬ ಪುರೋಹಿತನನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು, ಆ ವ್ಯಕ್ತಿ ಅಭಿವೃದ್ಧಿ ಅಜೆಂಡಾಗಿಂತ ಆರ್ ಎಸ್ಎಸ್ ಅಜೆಂಡಾಗೆ ಮಹತ್ವ ನೀಡುತ್ತಾರೆ ಎಂದು ಹೇಳಿದ್ದಾರೆ.
ಇಂದು ಸಂಸತ್ ಹೊರಗಡೆ ಯೋಗಿ ಆದಿತ್ಯನಾಥ್ ಆಯ್ಕೆ ಬಗ್ಗೆ ಹಾಗೂ ಬಿಎಸ್ಪಿ ನಾಯಕನ ಹತ್ಯೆ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಾಯಾವತಿ, ರಾಜ್ಯದಲ್ಲಿ ಮತ್ತೆ ಭಯದ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ ಕೋಮು ಆಧಾರದ ಮೇಲೆ ಉತ್ತರ ಪ್ರದೇಶವನ್ನು ಒಡೆಯಲಿದೆ ಎಂದು ಆರೋಪಿಸಿದರು.
ಬಿಜೆಪಿ ಹಿಂದೂತ್ವವಾದಿ ನಾಯಕ ಹಾಗೂ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್ ಅವರು ನಿನ್ನೆಯಷ್ಟೆ ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics