ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಅಯೋಧ್ಯೆ ವಿವಾದ: ಸುಪ್ರೀಂ ಆದೇಶ ಸ್ವಾಗತಿಸಿದ ಸಿಎಂ ಯೋಗಿ ಆದಿತ್ಯನಾಥ್

ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ...

ನವದೆಹಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಸ್ವಾಗತಿಸಿದ್ದಾರೆ. 
ಎರಡೂ ಧರ್ಮದ ಮುಖಂಡರು ಕುಳಿತು ಸಂಧಾನದ ಮಾತುಕತೆಯ ಮೂಲಕ ಆಯೋಧ್ಯೆ ವಿವಾದ ಬಗೆಹರಿಸಿಕೊಳ್ಳ ಬೇಕಿದೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ನ್ಯಾಯಾಲಯ ಉತ್ತಮವಾದ ಆದೇಶವನ್ನೇ ನೀಡಿದೆ. ಸಮಸ್ಯೆ ಬಗೆಹರಿಕೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಅಗತ್ಯ ಸಹಾಯಗಳನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಮಾತನಾಡಿ, ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ. ಸಮಸ್ಯೆ ಬಗೆಹರಿಕೆಗೆ ಎಲ್ಲರೂ ಒಮ್ಮತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. 
ರಾಮ ಮಂದಿರ ವಿವಾದ ಸಂಬಂಧ ಇಂದು ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!