ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ 
ದೇಶ

ಎಸ್.ಎಂ. ಕೃಷ್ಣರ ಪ್ರಗತಿಪರ ವ್ಯಕ್ತಿತ್ವದಿಂದ ಬಿಜೆಪಿಗೆ ಶಕ್ತಿ: ಅನಂತ್ ಕುಮಾರ್

ಕಾಂಗ್ರೆಸ್ ನ ಮಾಜಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ಹರ್ಷ...

ನವದೆಹಲಿ:  ಕಾಂಗ್ರೆಸ್ ನ ಮಾಜಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ಕರ್ನಾಟಕದಲ್ಲಿ ಕೃಷ್ಣ ಅವರಿಗಿರುವ ಪ್ರಗತಿಪರ ವ್ಯಕ್ತಿತ್ವದಿಂದ ಕೇಸರಿ ಪಕ್ಷಕ್ಕೆ ಬಲ ಸಿಗಲಿದೆ ಎಂದು ಹೇಳಿದ್ದಾರೆ.
ಕೃಷ್ಣ ಅವರು ದೇಶದ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರು. ಅವರ ಬಗ್ಗೆ ಇರುವ ಜನಪ್ರಿಯ, ಅಭಿವೃದ್ಧಿಶೀಲ ಕಾಳಜಿಯಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ದೊರಕಲಿದೆ. ಅವರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅವರು ಬಿಜೆಪಿಗೆ ಸೇರಲು ಆಸಕ್ತಿ ತೋರಿಸಿದರು. ಅವರು ನನ್ನ ಸ್ನೇಹಿತನಾಗಿದ್ದು ಹಿರಿಯ ಸಹೋದ್ಯೋಗಿ ಕೂಡ ಹೌದು ಎಂದು ಹೇಳಿದರು.
ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿರುವ ಎಸ್.ಎಂ.ಕೃಷ್ಣ ಅವರು, ಕಳೆದ ವಾರ ತಮ್ಮ ಸೋದರಿಯ ನಿಧನ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದರು. 
84 ವರ್ಷದ ಎಸ್.ಎಂ.ಕೃಷ್ಣ ಅವರು ಜನವರಿ 29ರಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT