ಬಿಜಾಪುರ್ (ಛತ್ತೀಸ್ಗಢ): ಛತ್ತೀಸ್ಗಢದ ಜಗ್ದಾಲ್ ಪುರ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಜಗ್ದಾಲ್ ಪುರದಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಐವರು ನಕ್ಸಲರು ಶರಣಾಗತಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ಇಬ್ಬರು ಯೋಧರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ.
ಬಿಜಾಪುರ ಜಿಲ್ಲೆಯಲ್ಲಿಯೂ ಯೋಧರು ಕಾರ್ಯಾಚರಣೆಯನ್ನು ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ. ಹುತಾತ್ಮ ಯೋಧನನ್ನು ತರುಣ್ ಸೋಧಿ ಎಂದು ಗುರ್ತಿಸಲಾಗಿದೆ.