ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ) 
ದೇಶ

ಸಂಸದರ ಪಿಂಚಣಿ: ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ

ಚುನಾವಣಾ ಆಯೋಗ ಮತ್ತು ಯೂನಿಯನ್ ಆಫ್ ಇಂಡಿಯಾಗೆ ಬುಧವಾರ ನೊಟೀಸ್...

ನವದೆಹಲಿ: ಚುನಾವಣಾ ಆಯೋಗ ಮತ್ತು ಯೂನಿಯನ್ ಆಫ್ ಇಂಡಿಯಾಗೆ ಬುಧವಾರ ನೊಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್, ಸಂಸದರಿಗೆ ಅರ್ಹತೆಯಿರುವ ಪಿಂಚಣಿ ಮತ್ತು ಭತ್ಯೆಗಳಿಗೆ ಕಾಯಿದೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಗೆ ಉತ್ತರಿಸುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಇದರ ಜೊತೆಗೆ ಲೋಕಸಭೆ ಮತ್ತು ರಾಜ್ಯಸಭೆಗಳ ಮಹಾ ಕಾರ್ಯದರ್ಶಿಗೆ ಕೂಡ ನೊಟೀಸ್ ಜಾರಿ ಮಾಡಿ ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ಹೇಳಿದೆ.
ನ್ಯಾಯಮೂರ್ತಿಗಳಾದ ಜೆ. ಚೆಲಮೇಶ್ವರ್ ಮತ್ತು ಎಸ್. ಅಬ್ದುಲ್ ನಾಸೀರ್ ಅವರನ್ನೊಳಗೊಂಡ ನ್ಯಾಯಪೀಠ, ಉತ್ತರ ಪ್ರದೇಶ ಮೂಲದ ಸರ್ಕಾರೇತರ ಸಂಘಟನೆ ಲೋಕ್ ಪ್ರಹರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ಆಲಿಸಿತು.
ವಿಷಯದ ಗಂಭೀರತೆ ಅರ್ಥವಾಗುತ್ತಿದ್ದು ಅದನ್ನು ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.
ಸಂಸದರು ಪಡೆಯುತ್ತಿರುವ ಭತ್ಯೆಗಳ ಬಗ್ಗೆ ಯಾವುದೇ ಮಾರ್ಗಸೂಚಿಗಳಿಲ್ಲ ಎಂದು ಅರ್ಜಿದಾರರು ವಾದ ಮಾಡಿದ್ದಾರೆ. ಒಬ್ಬ ವ್ಯಕ್ತಿ 25-26ನೇ ವಯಸ್ಸಿನಲ್ಲಿ ಸಂಸದನಾದರೆ ಮುಂದೆ ಸಂಸದನಾಗದಿದ್ದರೂ ಆತ ತನ್ನ ಜೀವಿತಾವಧಿಯುದ್ದಕ್ಕೂ ಪಿಂಚಣಿ ಪಡೆಯಲು ಅರ್ಹನಾಗಿರುತ್ತಾನೆ ಎಂದು ಅರ್ಜಿದಾರರ ಪರ ವಕೀಲೆ ಕಾಮಿನಿ ಜೈಸ್ವಾಲ್ ನ್ಯಾಯಾಲಯದಲ್ಲಿ ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT