ಸುಪ್ರೀಂ ಕೋರ್ಟ್ 
ದೇಶ

ಕರ್ನಾಟಕ ಸೇರಿ 10 ಬರಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್

ಕರ್ನಾಟಕ ಸೇರಿದಂತೆ 10 ರಾಜ್ಯಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರಗಾಲ ಕುರಿತ ಕೇಸಿಗೆ...

ನವದೆಹಲಿ: ಕರ್ನಾಟಕ ಸೇರಿದಂತೆ 10 ರಾಜ್ಯಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರಗಾಲ ಕುರಿತ ಕೇಸಿಗೆ ಸಂಬಂಧಪಟ್ಟಂತೆ ಏಪ್ರಿಲ್ 26ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಬುಧವಾರ ಸಮನ್ಸ್ ಹೊರಡಿಸಿದೆ.
ಬರಪೀಡಿತ ರಾಜ್ಯಗಳ ಜನರಿಗೆ ಸರಿಯಾದ ಪುನರ್ವಸತಿ ಸೌಕರ್ಯ ಮತ್ತು ಹಣಕಾಸು ನೆರವು ಒದಗಿಸುವಂತೆ ಸ್ವರಾಜ್ ಅಭಿಯಾನ ಎಂಬ ಸರ್ಕಾರೇತರ ಸಂಘಟನೆ ಸಲ್ಲಿಸಿದ ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ಜಾರಿ ಮಾಡಿದೆ. 
ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ ತೆಲಂಗಾಣ, ಗುಜರಾತ್, ಛತ್ತೀಸ್ ಗಢ, ಹರ್ಯಾಣ, ಮಧ್ಯ ಪ್ರದೇಶ, ಬಿಹಾರ, ಜಾರ್ಖಂಡ್ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ.
ಆರಂಭದಲ್ಲಿ ಬರಪೀಡಿತ ರಾಜ್ಯಗಳ ಪಟ್ಟಿಯಲ್ಲಿ 12 ರಾಜ್ಯಗಳಿದ್ದವು. ನಂತರ ಉತ್ತರ ಪ್ರದೇಶ ಮತ್ತು ಒಡಿಶಾವನ್ನು ಅಳಿಸಲಾಯಿತು.
ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ ಸಬ್ಸಿಡಿ ಬೆಲೆಯಲ್ಲಿ ಬರಪೀಡಿತ ರಾಜ್ಯಗಳ ಜನರಿಗೆ ಆಹಾರ ಪದಾರ್ಥಗಳನ್ನು ಒದಗಿಸುವಂತೆ ಕಳೆದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 
ಈ 10 ರಾಜ್ಯಗಳಿಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತಿಂಗಳಲ್ಲಿ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವಂತೆ ಎಪಿಎಲ್ ಕಾರ್ಡು ಹೊಂದಿರುವವರಲ್ಲಿ ಸಹ ಪ್ರತಿ ವ್ಯಕ್ತಿಗೆ 5 ಕೆಜಿಯಂತೆ ಮತ್ತು ಕಾರ್ಡು ಹೊಂದಿಲ್ಲದವರಿಗೂ ಕೂಡ ಆಹಾರ ಧಾನ್ಯ ಒದಗಿಸಲು ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ