ದೇಶ

ಉತ್ತರ ಪ್ರದೇಶ ಆಂಟಿ ರೋಮಿಯೋ ಸ್ಕ್ವಾಡ್ ರಚನೆಯನ್ನು ಪ್ರಶ್ನಿಸಿದ ಕಾಂಗ್ರೆಸ್ ಸಂಸದೆ!

ರೋಮಿಯೋ ಸ್ಕ್ವಾಡ್ ನ್ನು ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ಉತ್ತರ ಪ್ರದೇಶದಲ್ಲಿ ಯಾದವ ಹಾಗೂ ಇನ್ನಿತರ ನಿರ್ದಿಷ್ಟ ಜಾತಿಯವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದಲ್ಲಿ ಬೀದಿ ಕಾಮಣ್ಣರ ಕಾಟಕ್ಕೆ ಬ್ರೇಕ್ ಹಾಕಲು ಸಿಎಂ ಯೋಗಿ ಆದಿತ್ಯನಾಥ್ ಅವರು ರಚಿಸಿರುವ ಆಂಟಿ ರೋಮಿಯೋ ಸ್ಕ್ವಾಡ್ ನ್ನು ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ಉತ್ತರ ಪ್ರದೇಶದಲ್ಲಿ ಯಾದವ ಹಾಗೂ ಇನ್ನಿತರ ನಿರ್ದಿಷ್ಟ ಜಾತಿಯವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ಉತ್ತರ ಪ್ರದೇಶದಲ್ಲಿ ನಿರ್ದಿಷ್ಟ ಜಾತಿಯವರನ್ನು ಟಾರ್ಗೆಟ್ ಮಾಡಲಾಗುತ್ತಿರುವ ಬಗ್ಗೆ ಐಪಿಎಸ್ ಅಧಿಕಾರಿಯೊಬ್ಬರೂ ಹೇಳಿದ್ದಾರೆ. ಮುಸ್ಲಿಮರು, ಯಾದವರು ಹಾಗೂ ದಲಿತರ ನಡುವೆ ವೈಷಮ್ಯ ಉಂಟುಮಾಡಲು ಯತ್ನಿಸುತ್ತಿರುವುದು ನಮ್ಮ ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ರಂಜನ್ ಸಂಸತ್ ನಲ್ಲಿ ಹೇಳಿದ್ದಾರೆ. 
ರಂಜೀತ್ ರಂಜನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಾತಿಯ ಆಧಾರದಲ್ಲಿ ತಾರತಮ್ಯ ಉಂಟಾಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡಿದ್ದಾರೆ. 
ಸರ್ಕಾರ ರಚನೆಯಾಗಿ ಇನ್ನೂ 3-4 ದಿನಗಳು ಕಳೆದಿವೆಯಷ್ಟೆ, ಧರ್ಮ, ಸಮುದಾಯ, ಜಾತಿಯ ಆಧಾರದಲ್ಲಿ ತಾರತಮ್ಯ ಉಂಟಾಗುವುದಿಲ್ಲ, ಇದನ್ನೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹೇಳಿದ್ದಾರೆ ಎಂದು ರಾಜನಾಥ್ ಸಿಂಗ್ ಸಂಸತ್ ಗೆ ಹೇಳಿದ್ದಾರೆ. ಹಿಮಾಂಶು ಕುಮಾರ್ ಎಂಬ ಐಪಿಎಸ್ ಅಧಿಕಾರಿ ಟ್ವೀಟ್ ನಲ್ಲಿ ಯಾದವ್ ಎಂಬ ಉಪನಾಮ ಇರುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಆದರೆ ನಂತರ ಅದನ್ನು ಡಿಲೀಟ್ ಮಾಡಿದ್ದರು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದೆ ರಂಜೀತ್ ರಂಜನ್ ವಿಷಯವನ್ನು ಸಂಸತ್ ನಲ್ಲಿ ಪ್ರಸ್ತಾಪಿಸಿದ್ದು, ಉತ್ತರ ಪ್ರದೇಶದಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT