ನವದೆಹಲಿ: ಶಿವಸೇನಾ ಸಂಸದ ರವೀಂದ್ರ ಗಾಯಕ್ ವಾಡ್ ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಪ್ರಕರಣ ಸದನದ ಹೊರಗೆ ನಡೆದಿರುವುದರಿಂದ ಸಂಸತ್ತು ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ತಿಳಿಸಿದ್ದಾರೆ.
ಸಂಸತ್ ಭವನದ ಹೊರಗೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಹೊರಗೆ ಈ ಘಟನೆ ನಡೆದಿರುವುದರಿಂದ ಸ್ವಯಂ ಪ್ರೇರಿತ ದೂರು ದಾಖಲಿಸಲು ಸಾಧ್ಯವಿಲ್ಲ. ವಿವರ ಪಡೆದುಕೊಂಡು ಯಾರಾದರೂ ದೂರು ನೀಡಿದರೆ ಅದಕ್ಕನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.