ನವದೆಹಲಿ: ಉತ್ತರ ಪ್ರದೇಶದಲ್ಲಿ ಕಸಾಯಿಖಾನೆಗಳನ್ನು ಬಂದ್ ಮಾಡಿಸುತ್ತಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿಪಿಐ-ಎಂ, ಕಸಾಯಿಖಾನೆಗಳನ್ನು ಬಂದ್ ಮಾಡಿಸುವುದು 25 ಲಕ್ಷ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಿದೆ.
ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಿಸುವ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಕಸಾಯಿಖಾನೆಗಳನ್ನೂ ಟಾರ್ಗೆಟ್ ಮಾಡುತ್ತಿದ್ದು, ಮಾಂಸದ ಅಂಗಡಿಗಳ ಮೇಲೆ ದಾಳಿ ನಡೆದಿರುವ ಹಲವು ಉದಾಹರಣೆಗಳಿವೆ ಎಂದು ಸಿಪಿಐ-ಎಂ ಆರೋಪಿಸಿದೆ.
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದಾಗಿನಿಂದ ಅಲ್ಪಸಂಖ್ಯಾತ ಸಮುದಾಯದವರ ಮೇಲೆ ಕ್ರೂರ ದಾಳಿ ನಡೆಯುತ್ತಿದ್ದು, ಭಾರತ ವಿದೇಶಗಳಿಗೆ ರಫ್ತು ಮಾಡುತ್ತಿರುವ ಒಟ್ಟಾರೆ ಮಾಂಸದ ಪೈಕಿ ಶೇ.50 ರಷ್ಟು ಉತ್ತರ ಪ್ರದೇಶದ್ದೇ ಆಗಿದ್ದು, ಕಸಾಯಿಖಾನೆಗಳನ್ನು ಬಂದ್ ಮಾಡಿಸುವುದರಿಂದ 25 ಲಕ್ಷ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ಸಿಪಿಐಎಂ ಆರೋಪಿಸಿದೆ. ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಕೇಂದ್ರ ಸರ್ಕಾರ ಭದ್ರತೆಯ ಭರವಸೆ ನೀಡಬೇಕು ಎಂದು ಸಿಪಿಐ-ಎಂ ಆಗ್ರಹಿಸಿದೆ.